ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ಸುಮಾರು 2 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಅಬ್ಬಾಸ್ (50), ದಿ. ಮೂಸ ಕುಂಞಿ ಅವರ ಪುತ್ರ, ಹಿದಾಯತ್ ಮಸೀದಿ ಸಮೀಪ, ಹಿದಾಯತ್ ನಗರ ಮುಳ್ಳುಗುಡ್ಡೆ, ಕೋಟೆಕಾರ್ ಗ್ರಾಮ, ಉಳ್ಳಾಲ ತಾಲೂಕು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ.
ಜೂನ್ 25, 2026ರಂದು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಲ್ಕಿ ಪೊಲೀಸರು, ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಸುಮಾರು 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ಸುಮಾರು 2 ಲಕ್ಷ ರೂ. ಎಂದು ತಿಳಿದುಬಂದಿದೆ.
ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 20(ಬಿ) ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…