ಮುಲ್ಕಿ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಚರ್ಚ್ ಕಡೆಯಿಂದ ಮಹಿಳೆಯೋರ್ವರು ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿರುವ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಮಹಿಳೆಗೆ ಢಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಉರುಳಿದ್ದು ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಇದ್ದು ಕಾರಿನಲ್ಲಿದ್ದವರೂ ಗಾಯಗೊಂಡಿದ್ದಾರೆ.
ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್ – Vishwanews24
ಪಾದಚಾರಿ ಮಹಿಳೆ ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ.ಗಾಯಾಳುಗಳಿಗೆ ಸ್ಥಳೀಯ ಅಂಗಡಿ ಮಾಲಿಕರಾದ ಅಲ್ವಿನ್, ಸ್ಯಾನೀ ಪಿಂಟೋ, ಶೈಲಾ ಸಿಕ್ವೇರಾ ಸಹಕರಿಸಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…