ಮುಲ್ಕಿ : ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ ಕೆಲವು ತಿಂಗಳ ಹಿಂದೆ ಚಿತ್ರದುರ್ಗದಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದನು. ಈ ನಡುವೆ ಕಾಲೇಜಿನಲ್ಲಿರುವಾಗ ಕಾರ್ತಿಕ್ ಪೂಜಾರಿ ಸಹಪಾಠಿ ಶರಣ್ಯ ಎಂಬಳನ್ನು ಪ್ರೀತಿಸುತ್ತಿದ್ದ. ಇಬ್ಬರು ಅಪ್ರಾಪ್ತರಾದ ಕಾರಣ ಮದುವೆಗೆ ಅನುಮತಿ ಸಿಕ್ಕಿಲ್ಲ. ಪ್ರಾಪ್ತರಾದ ಬಳಿಕ ಮದುವೆ ಮಾಡುವ ಬಾಂಡ್ ಪೇಪರ್ ಮೂಲಕ ಸಮ್ಮತಿ ದೊರೆತಿತ್ತು ಎನ್ನಲಾಗಿದೆ.
ಈ ನಡುವೆ ಶರಣ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಮೂಡುಬಿದ್ರೆಯ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರೀತಿಸಿದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದೇ ತಡ, ಚಿತ್ರದುರ್ಗದಲ್ಲಿದ್ದ ಕಾರ್ತಿಕ್ ಪೂಜಾರಿ ಏಕಾಏಕಿ ಶನಿವಾರ ಸಂಜೆ ಮನೆಗೆ ಬಂದಿದ್ದಾನೆ. ತಾಯಿ ಕೇರಳಕ್ಕೆ ಹೋಗಿ ಭಾನುವಾರ ಬೆಳಗ್ಗೆ ಬರುವಷ್ಟರಲ್ಲಿ ಕಾರ್ತಿಕ್ ತನ್ನ ಮನೆಯ ಅಣತಿ ದೂರದಲ್ಲಿರುವ ರೈಲ್ವೇ ಹಳಿಯಲ್ಲಿ ಮಂಗಳೂರಿನಿಂದ ಮುರ್ಡೇಶ್ವರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್ ಭೇಟಿ ನೀಡಿ ಪರಿಶೀಲಿಸಿದ್ದು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…