ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ – vishwanews24
ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ
ಮುಲ್ಕಿ: ಶರನ್ನವರಾತ್ರಿ ಸಂಭ್ರಮದಲ್ಲಿರುವ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿದರು.
ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ನಟ ಸುನಿಲ್ ಶೆಟ್ಟಿ ರವರಿಗೆ ಪ್ರಸಾದ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ರವರು ದೇವಸ್ಥಾನದ ಮುಂದಿನ ಅಭಿವೃದ್ಧಿ ಚಿಂತನೆ ಹಾಗೂ ಜೀರ್ಣೋದ್ಧಾರದ ಬಗ್ಗೆ ನಟ ಸುನಿಲ್ ಶೆಟ್ಟಿ ರವರಿಗೆ ಮಾಹಿತಿ ನೀಡಿ ಸಹಕಾರ ಕೋರಿದರು.
ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24
ಇದೇ ಸಂದರ್ಭದಲ್ಲಿ ನಟನೊಂದಿಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಬಿದ್ದರು ನಟ ಸುನಿಲ್ ಶೆಟ್ಟಿ ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು ಈ ಸಂದರ್ಭ ಅರ್ಚಕ ಗೋಪಾಲಕೃಷ್ಣ ಭಟ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಮಹೀಮ್ ಹೆಗ್ಡೆ,ಅಶ್ವಿನ್ ಆಳ್ವ, ಅಕೌಂಟೆಂಟ್ ಶಿವಶಂಕರ್, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
