Featured

ಮುಲ್ಕಿ : ಬಪ್ಪನಾಡು ಶ್ರೀ ದುರ್ಗೆಗೆ ದಾನಿಗಳಿಂದ ಪ್ರಭಾವಳಿ, ಚಿನ್ನದ ರುದ್ರಾಕ್ಷಿ ಸರ, ಬೆಳ್ಳಿಯ ಸರ ಸಮರ್ಪಣೆ -Vishwanews24

ಮುಲ್ಕಿ : ಬಪ್ಪನಾಡು ಶ್ರೀ ದುರ್ಗೆಗೆ ದಾನಿಗಳಿಂದ ಪ್ರಭಾವಳಿ, ಚಿನ್ನದ ರುದ್ರಾಕ್ಷಿ ಸರ, ಬೆಳ್ಳಿಯ ಸರ ಸಮರ್ಪಣೆ -Vishwanews24

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವರಿಗೆ, ದಾನಿಗಳಾದ ದೇವಳದ ಬ್ರಹ್ಮಕಲಶ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಜಾತಾ ನಾರಾಯಣ ಶೆಟ್ಟಿ ದಂಪತಿಗಳಿಂದ ಶ್ರೀ ದೇವರಿಗೆ ರಜತ ಪ್ರಭಾವಳಿ, ಗಣಪತಿ ದೇವರಿಗೆ ಚಿನ್ನದ ರುದ್ರಾಕ್ಷಿ ಸರ ಹಾಗೂ ನರಸಿಂಹ ದೇವರಿಗೆ ಬೆಳ್ಳಿಯ ಸರವನ್ನು ಮೆರವಣಿಗೆ ಮೂಲಕ ಸಮರ್ಪಿಸಿದರು.

ಈ ಸಂದರ್ಭ ದೇವಾಳದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ನಡೆಸಿ ದೇವಳದ ಜೀರ್ಣೋದ್ಧಾರಕ್ಕೆ ದಾನಿಗಳ ಸಹಕಾರ ಶ್ಲಾಘನೀಯವಾಗಿದ್ದು , ಕೋರೋನ ದಿನಗಳಲ್ಲಿಯೂ ದೇವಳದ ಅಭಿವೃದ್ಧಿಗೆ ದಾನಿಗಳು ಹಾಗೂ ಭಕ್ತರು ಮತ್ತಷ್ಟು ಚಿಂತನೆ ನಡೆಸುತ್ತಿರುವುದು ಉತ್ತಮ ಸಂಕೇತವಾಗಿದೆ. ದೇವರು ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯ ಗಳನ್ನು ನೀಡಿ ರಾಷ್ಟ್ರವನ್ನು ಕೊರೋನಾ ಮುಕ್ತಗೊಳಿಸಲಿ ಎಂದರು.

ಈ ಸಂದರ್ಭ ಮಾಜೀ ಸಚಿವ ಅಭಯಚಂದ್ರ ಜೈನ್, ದೇವಳದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಸುಹಾಸಿನಿ ಶೆಟ್ಟಿ, ಅರ್ಚಕರಾದ ನರಸಿಂಹ ಭಟ್, ಕಿಲ್ಪಾಡಿ ಭಂಡಸಾಲೆ ಶೇಖರ ಶೆಟ್ಟಿ, ಮುರಳೀಧರ ಭಂಡಾರಿ, ಅತುಲ್ ಕುಡ್ವ, ಧನಂಜಯ ಮಟ್ಟು, ಚಂದ್ರಶೇಖರ ಸುವರ್ಣ, ಜೀವನ್ ಶೆಟ್ಟಿ ಕಾರ್ನಾಡು, ಮಹಿಮ ಹೆಗ್ಡೆ, ಶಿವಶಂಕರ್, ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago