ಮುಲ್ಕಿ: ಕೆರೆಕಾಡು ಎಂಬಲ್ಲಿ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.
ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರನ್ನು ಬಂಧಿಸಿರುವ ಮುಲ್ಕಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲಾ ಮೂವರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ಕೊಪ್ಪಲ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾವೂದ್ ಹಕೀಂ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಐವರ ತಂಡವು ಶನಿವಾರ ಕಂಬಕ್ಕೆ ಕಟ್ಟಿ ಹಾಕಿ ತೀವ್ರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು, ದಾವೂದ್‌ನನ್ನು ವಶಕ್ಕೆ ಪಡೆದು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…