Featured

ಮುಲ್ಕಿ :  ಬಾಲಕಿಗೆ ಕಿರುಕುಳ ಪ್ರಕರಣ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಥಳಿಸಿದ ಮೂವರು ಆರೋಪಿಗಳಿಗೆ ಜಾಮೀನು – Vishwanews24

ಮುಲ್ಕಿ :  ಬಾಲಕಿಗೆ ಕಿರುಕುಳ ಪ್ರಕರಣ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಥಳಿಸಿದ ಮೂವರು ಆರೋಪಿಗಳಿಗೆ ಜಾಮೀನು

ಮುಲ್ಕಿ: ಕೆರೆಕಾಡು ಎಂಬಲ್ಲಿ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಅವರನ್ನು ಬಂಧಿಸಿರುವ ಮುಲ್ಕಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲಾ ಮೂವರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ಕೊಪ್ಪಲ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವೂದ್ ಹಕೀಂ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಐವರ ತಂಡವು ಶನಿವಾರ ಕಂಬಕ್ಕೆ ಕಟ್ಟಿ ಹಾಕಿ ತೀವ್ರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಪೊಲೀಸರು, ದಾವೂದ್‌ನನ್ನು ವಶಕ್ಕೆ ಪಡೆದು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

7 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

8 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

8 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

8 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

9 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

9 hours ago