Featured

ಮುಲ್ಕಿ: ಭಾರೀ ಮಳೆಯಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಭೇಟಿ , ಪರಿಶೀಲನೆ- Vishwanews24

ಮುಲ್ಕಿ: ಭಾರೀ ಮಳೆಯಿಂದಾಗಿ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಭೇಟಿ – Vishwanews24

ಮುಲ್ಕಿ: ಭಾರೀ ಮಳೆಯಿಂದಾಗಿ ನೆರೆ ಪೀಡಿತವಾಗಿ ಎಕರೆಗಟ್ಟಲೆ ಕೃಷಿ ಹಾನಿ ಸಂಭವಿಸಿರುವ ಪಕ್ಷಿಕೆರೆ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಯ , ಕುದುರು, ಬೈಲಗುತ್ತು ಪ್ರದೇಶಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ನೆರೆ ಬಂದು ಸಂತ್ರಸ್ತರಾದ ಸ್ಥಳೀಯ ಕೃಷಿಕರಾದ ಸತೀಶ್ ಶೆಟ್ಟಿ ಬೈಲಗುತ್ತು, ಉಷಾ ಶೆಟ್ಟಿ ವೇದಾವತಿ ಉಳ್ಯ ಕುದುರು ಮತ್ತಿತರರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಬಳಿ ತೋಡಿಕೊಂಡರು.
ಈ ಭಾಗದಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ನಂದಿನಿ ಉಕ್ಕಿ ಹರಿದು ಎಕರೆಗಟ್ಟಲೆ ಕೃಷಿ ನಾಶ ಉಂಟಾಗುತ್ತಿದೆ. ಈ ಬಾರಿ ಸುಮಾರು 500ಕ್ಕೂ ಹೆಚ್ಚು ಎಕರೆ ಕೃಷಿನಾಶ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಹಾನಿ ಸಂಭವಿಸಿದೆ. ಉಳ್ಯ ಪರಿಸರದಲ್ಲಿ ಸುಮಾರು 5ಕಿಮೀ ಉದ್ದಕ್ಕೆ ತಡೆಗೋಡೆ ಅವಶ್ಯಕತೆ ಇದೆ ಎಂದು. ಪ್ರತಿಪಾದಿಸಿದರು.
ಈ ಭಾಗದಲ್ಲಿ ದಾರಿದೀಪ ಅವ್ಯವಸ್ಥೆಯನ್ನು ಜಿಲ್ಲಾಧಿಕಾರಿಗಳಿಗೆ ಮನದಾಣಿಸಿದ ಸ್ಥಳೀಯರು ಕೂಡಲೇ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಪಂಚಾಯತ್ ವ್ಯಾಪ್ತಿಯ ಬೈಲಗುತ್ತು ಪ್ರದೇಶದಲ್ಲಿ ಕೃಷಿ ಹಾನಿಯನ್ನು ವೀಕ್ಷಿಸಿ, ಸುರತ್ಕಲ್ ಚೇಳಾಯರು ಮಧ್ಯ ಸಂಪರ್ಕ ರಸ್ತೆಯ ಕಿರು ಸೇತುವೆ ಮುಳುಗಡೆಯಾಗಿರುವುದನ್ನು ಪರಿಶೀಲಿಸುತ್ತಿರುವಾಗ ಸ್ಥಳೀಯರೊಬ್ಬರು ನೆರೆ ನೀರಿನಲ್ಲಿ ಮನೆಗೆ ಅಕ್ಕಿ ದಿನಸಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿರುವ ದೃಶ್ಯವನ್ನು ವೀಕ್ಷಿಸಿದರು.
ಬಳಿಕ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಮಾತನಾಡಿ ಕೂಡಲೇ ಅಧಿಕಾರಿಗಳು ಕೃಷಿನಾಶಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತರಿಗೆ ಪರಿಹಾರ ನೀಡಲು ಸೂಚನೆ ನೀಡಿದರು.
ಕೆಮ್ರಾಲ್ ಗ್ರಾಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ , ಸದಸ್ಯ ನವೀನ್ ಸಾಲ್ಯಾನ್,ರೇವತಿ ಮಾಜೀ ಜೀಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಲ್ಕಿ ತಹಶಿಲ್ದಾರ್ ಗುರುಪ್ರಸಾದ್, ಆರ್ ಐ ದಿನೇಶ್,ವಿ ಎ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago