Featured

ಮುಲ್ಕಿ : ಮರುವಾಯಿ ಹೆಕ್ಕಲು ಹೋಗಿ ನೀರುಪಾಲಾದ ಯುವಕ – vishwanews24

ಮುಲ್ಕಿ : ಮರುವಾಯಿ ಹೆಕ್ಕಲು ಹೋಗಿ ನೀರುಪಾಲಾದ ಯುವಕ

ಮೂಲ್ಕಿ : ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ.

ಬಜಪೆಯ ಅದ್ಯಪಾಡಿಯ ಸುಮಾರು 10 ಯುವಕರ ತಂಡ ಮರುವಾಯಿ ಹೆಕ್ಕಲು ಆಗಮಿಸಿದ್ದು, ಅದರಲ್ಲಿ ನಾಲ್ವರು ಮರುವಾಯಿ ಹೆಕ್ಕುವುದಕ್ಕಾಗಿ ಸಸಿಹಿತ್ಲು ಮುಂಡಾ ಬೀಚ್‌ ಬಳಿಯ ಅಳಿವೆಯ ಬಳಿ ನದಿಗೆ ಇಳಿದಿದ್ದರು. ಉಳಿದ ಆರು ಮಂದಿ ದಡದಲ್ಲಿಯೇ ಇದ್ದರು, ನೀರಿಗೆ ಇಳಿದವರಲ್ಲಿ ಈಜು ಬಾರದ ಕಾರಣ ಕೆಲವು ಯುವಕರು ನೀರಿನಲ್ಲಿ ಮುಳುಗಡೆಯಾಗುವ ಹಂತಕ್ಕೆ ಹೋಗಿದ್ದರು. ಈ ವೇಳೆ ಅಭಿಲಾಷ್‌ (24) ಉಳಿದವರನ್ನು ಬದುಕಿಸಲು ಹೋಗಿ ತಾನು ಜೀವ ಕಳೆದುಕೊಂಡಿದ್ದಾರೆ. ಯುವಕರ ಬೊಬ್ಬೆ ಕೇಳಿ ಧಾವಿಸಿ ಬಂದ ಮೀನುಗಾರರು ಮೂವರನ್ನು ರಕ್ಷಿಸಿದ್ದಾರೆ. ನೀರುಪಾಲಾಗಿರುವ ಅಭಿಲಾಷ್‌ ಪತ್ತೆಯಾಗಿಲ್ಲ.

ಕೊಳಚಿಕಂಬಳ ಬಳಿ ನದಿಯಲ್ಲಿ ನೀರು ಇಳಿತದ ಸಮಯ ಸುಮಾರು 2 ಕಿ.ಮೀ. ನದಿ ಪ್ರದೇಶ ಖಾಲಿಯಾಗಿ ಮೈದಾನದಂತಿರುತ್ತದೆ. ಈ ಸಂದರ್ಭದಲ್ಲಿ ಜನರು ಇಲ್ಲಿ ಇಳಿದು ಅಳಿವೆಯ ತನಕ ನಡೆದುಕೊಂಡು ಹೋಗುತ್ತಾರೆ. ಆದರೆ ಭರತ ಆರಂಭವಾದರೆ ನಾಲ್ಕು ದಿಕ್ಕಿನಿಂದಲೂ ಸುಮಾರು ನಾಲ್ಕೈದಡಿ ನೀರು ತುಂಬಿಕೊಳ್ಳುತ್ತಿದ್ದು, ಈ ಹಿಂದೆಯೂ ಹಲವಾರು ಅವಘಡಗಳು ಇಲ್ಲಿ ನಡೆದ ಉದಾಹರಣೆಗಳು ಇವೆ. ಈ ಬಗ್ಗೆ ಎಚ್ಚರಿಸಿ ನೀರಿಗೆ ಇಳಿಯದಂತೆ ಸೂಚಿಸಿದರೆ ಯಾರೂ ಕೇಳುವುದಿಲ್ಲ ಸ್ಥಳೀಯರು ಹೇಳುತ್ತಾರೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

13 hours ago