Featured

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ   – vishwanews24

ಮುಲ್ಕಿ : ರಿಕ್ಷಾ ಚಾಲಕ ಶರೀಫ್‌ರನ್ನ ಕೊಲೆಗೈದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರಿನ ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ರಿಕ್ಷಾ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು

ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿಯಾದ ಆಟೋ ಚಾಲಕ ಮುಹಮ್ಮದ್ ಶರೀಫ್ ರವರ ನಿಗೂಡ ಸಾವು ಕೊಲೆ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ.

ಶರೀಫ್ ರವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರಗಳಿಂದ ಕಡಿದ ಗಾಯಗಳಾಗಿವೆ ಎಂದು ಪರೀಕ್ಷೆಯಿಂದ ದೃಡ ಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಶರೀಫ್ ರವರ ಮೃತದೇಹ ಪತ್ತೆಯಾಗಿತ್ತು.

ಕುತ್ತಿಗೆಯ ಬಲವಾದ ಗಾಯ ಸಾವಿಗೆ ಪ್ರಮುಖ ಕಾರಣ. ಗಂಟೆಗಳ ಕಾಲ ನೀರಿನಲ್ಲಿದ್ದರೂ ಶ್ವಾಸ ಕೋಶ ದೊಳಗೆ ನೀರು ನುಗ್ಗಿಲ್ಲ. ಇದರಿಂದ ಕೊಲೆ ಗೈದ ಬಳಿಕ ಬಾವಿಗೆ ಎಸೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮಂಜೇಶ್ವರ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತದೆ ಗುರುವಾರ ರಾತ್ರಿ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಸಂಶಯಾಸ್ಪದವಾಗಿ ಕಂಡು ಬಂದರೂ ರಿಕ್ಷಾವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ನಡೆಸಿದ ಶೋಧದಿಂದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಶುಕ್ರವಾರ ಬೆಳಿಗ್ಗೆ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ ಮಹಜರು ನಡೆಸಲಾಯಿತು. ಬುಧವಾರ ರಾತ್ರಿ ಹತ್ತು ಗಂಟೆಗೆ ಆಟೋ ರಿಕ್ಷಾವನ್ನು ಬಾಡಿಗೆಗೆಂದು ಮೂವರು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಅಂದು ರಾತ್ರಿಯಿಂದ ಮುಹಮ್ಮದ್ ಶರೀಫ್ ನಾಪತ್ತೆಯಾಗಿದ್ದರು. ಈ ಮೂವರನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago