ಮುಲ್ಕಿ : ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.
ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ಮಗಳನ್ನು ಬಸ್ ಸ್ಟೆಂಡ್ ಗೆ ಬಿಡಲು ಬಂದಿದ್ದು ಲಾರಿ ಗುದ್ದಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು. ಮಗಳು ಸವಿತಾ ಗೆ ಸಣ್ಣ ಪುಟ್ಟ ಗಾಯ ಅಪಾಯದಿಂದ ಪಾರಾಗಿದ್ದಾರೆ.
ಅಲ್ಲದೆ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದು, ಕರ್ತವ್ಯದಲ್ಲಿದ್ದ ಮಹಿಳೆ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಲಾರಿ ವಶಕ್ಕೆ ಪಡೆದು ಚಾಲಕನನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…