Featured

ಮುಸಲ್ಮಾನ ಬಾಂಧವರಿಗಾಗಿ ಆಯೋಧ್ಯೆಯ ಸೀತಾ ರಾಮ ದೇವಾಲಯದಲ್ಲಿ ಇಫ್ತಾರ್ ಕೂಟ -Vishwanews24

ಅಯೋಧ್ಯೆ,:ಶ್ರೀರಾಮ ಹುಟ್ಟಿದ ಆಯೋಧ್ಯೆಯಲ್ಲಿಯೇ ಮುಸಲ್ಮಾನ ಬಾಂಧವರಿಗಾಗಿ ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು.

ರಂಜಾನ್ ತಿಂಗಳ ಉಪವಾಸ ಮುಸ್ಲಿಂ ಬಾಂಧವರಿಗೆ ಅತಿ ಪವಿತ್ರವಾದುದು. ಹಾಗೂ ಉಪವಾಸ ಹಿಡಿಯುವುದು ಕಡ್ಡಾಯವಾಗಿದೆ. ಅದು ಈ ಬೇಸಿಗೆಯ ಬಿಸಿ ತಾಪದಲ್ಲಿ ಮುಸಲ್ಮಾನ ಬಾಂಧವರಿಗೆ ಉಪವಾಸ ಹಿಡಿಯುವುದು ಅತೀ ಕಠಿಣವಾಗಿದೆ. ಒಂದು ತುತ್ತು ಅನ್ನಕ್ಕೂ ಗತಿ ಇಲ್ಲದೆ ಹಸಿದವನ ನೋವು ಸಾಮಾನ್ಯ ಮನುಷ್ಯನು ತಿಳಿಯಬೇಕು ಎನ್ನುವ ಉದ್ದೇಶದಿಂದ ರಮ್ ಝಾನ್ ಉಪವಾಸವನ್ನು ಆಚರಿಸಲಾಗುತ್ತದೆ.

ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಜತೆ ಮಾತನಾಡಿರುವ ದೇಗುಲದ ಅರ್ಚಕ, ಇಫ್ತಾರ್‌ ಕೂಟದ ಆಯೋಜಕ ಯುಗಲ್‌ ಕಿಶೋರ್‌, ‘ದೇಗುಲದ ಆವರಣದಲ್ಲಿ ಆಯೋಜಿಸುತ್ತಿರುವ ಮೂರನೇ ಇಫ್ತಾರ್‌ ಕೂಟವಿದು. ಭವಿಷ್ಯದಲ್ಲೂ ನಾವು ಹೀಗೆಯೇ ನಡೆದುಕೊಳ್ಳುತ್ತೇವೆ. ನವೋತ್ಸಾಹದಿಂದ ಎಲ್ಲ ಧರ್ಮದ ಹಬ್ಬಗಳನ್ನೂ ನಾವು ಆಚರಿಸಬೇಕು,’ ಎಂದು ಅವರು ಅಭಿಪ್ರಾಯಪಟ್ಟರು.

ಶ್ರೀರಾಮ ಹುಟ್ಟಿದ ನೆಲದಲ್ಲಿ ಅಂದರೆ ಅಯೋಧ್ಯಾದಲ್ಲಿ ಮುಸಲ್ಮಾನ ಬಾಂಧವರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು. ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಸಮುದಾಯಕ್ಕೆ ಸಂಘಟಿತ ರೋಜಾ ಇಫ್ತಾರ್ ಆಯೋಜಿಸಲಾಗಿತ್ತು. ಈ ರೋಜಾ ಇಫ್ತಾರ್ನಲ್ಲಿ ಮುಸ್ಲಿಂ ಸಮುದಾಯದ ಜನರನ್ನು ಹೊರತುಪಡಿಸಿ, ನಗರದ ಕೆಲವು ಸಾಧು-ಸಂತರು ಕೂಡ ಭಾಗಿಯಾಗಿದ್ದರು.

ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಮುಜಾಮಿಲ್‌ ಫೈಜಲ್‌ ನಾವು ನವರಾತ್ರಿಯನ್ನು ಹಿಂದೂ ಬಾಂಧವರೊಂದಿಗೆ ಪ್ರತಿ ವರ್ಷ ಆಚರಿಸುತ್ತೇವೆ ಎಂದು ಅವರು ಹೇಳಿದರು.ಧರ್ಮದ ಅಂಕೆಗಳಿಲ್ಲದೆ ಎಲ್ಲರೂ ನಮ್ಮ ಜತೆಗೆ ಸೇರಬಹುದು ಎಂದೂ ಫೈಜಲ್‌ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago