ಉಡುಪಿ: ಮತದಾರರಿಗೆ ಬಿಜೆಪಿ ಭ್ರಮನಿರಸನ ಮಾಡಿದೆ. ಬಿಜೆಪಿಗೆ ಪರ್ಯಾಯ ಕಾಂಗ್ರೆಸ್ ಪಕ್ಷ ಮಾತ್ರ ಎಂಬ ಭಾವನೆ ಮೂಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಬೇಕು. ಇದಕ್ಕೆ ಕಾರ್ಯಕರ್ತರ ಬಲ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ನಗರದ ಪುರಭವನದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಕಾಂಗ್ರೆಸ್ ಬಲ ಕುಂದಿರುವುದು ಸತ್ಯ. ಹಿಂದೆ ಉಳ್ಳಾಲದಿಂದ ಉಡುಪಿವರೆಗೆ ಮಾಡಿದ್ದ ಸದ್ಭಾವನಾ ಯಾತ್ರೆಯನ್ನು ಮತ್ತೊಮ್ಮೆ ಮಾಡಿ ಪಕ್ಷವನ್ನು ಬಲಪಡಿಸೋಣ ಎಂದರು.
ಬಿಜೆಪಿ ಸುಳ್ಳಿನ ಪಕ್ಷ. ಜನರ ತಲೆಗೆ ಸುಳ್ಳುಗಳನ್ನು ತುಂಬಿ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಮುಸ್ಲಿಮರ ಪರ, ಹಿಂದೂ ವಿರೋಧಿಗಳು ಎಂದು ಬಿಂಬಿಸಿದ್ದಾರೆ. ನಾವು ಬಿಜೆಪಿಗರಂತೆ ಡೋಂಗಿ ಹಿಂದುಗಳಲ್ಲ, ಅಪ್ಪಟ ಹಿಂದೂಗಳು. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂಗಳನ್ನು ಒಟ್ಟಾಗಿ ಕರೆದೊಯ್ಯುವ ಪಕ್ಷ ಕಾಂಗ್ರೆಸ್ ಎಂದರು.
6 ವರ್ಷಗಳ ಅಧಿಕಾರಾವಧಿಯಲ್ಲಿ ಹೆಸರಿಸಬಹುದಾದ ಯಾವ ಉತ್ತಮ ಕೆಲಸವನ್ನೂ ಬಿಜೆಪಿ ಮಾಡಿಲ್ಲ. ನೋಟು ಅಮಾನ್ಯ, ಜಿಎಸ್ಟಿ ಹೆಸರಿನಲ್ಲಿ ಬಡವರಿಗೆ ತೊಂದರೆ ನೀಡಿದ್ದು ಅವರ ಸಾಧನೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ವಿಶುನಾಥನ್, ನಾರಾಯಣಸ್ವಾಮಿ, ಗೋಪಾಲ ಪೂಜಾರಿ, ಐವನ್ ಡಿಸೋಜಾ, ಯು.ಆರ್.ಸಭಾಪತಿ, ಜಿ.ಎ.ಭಾವಾ, ಎಂ.ಎ.ಗಫೂರ್, ರಂಗಸ್ವಾಮಿ, ರೋಷನಿ ಒಲಿವೆರಾ ಇದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…