Featured

ಮುಸ್ಲಿಂ, ಕ್ರಿಶ್ಚಿಯನ್‌, ಹಿಂದೂಗಳನ್ನು ಒಟ್ಟಾಗಿ ಕರೆದೊಯ್ಯುವ ಪಕ್ಷ ಕಾಂಗ್ರೆಸ್‌ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಬೇಕು : ಸಿದ್ದರಾಮಯ್ಯ -Vishwanews24

ಉಡುಪಿ: ಮತದಾರರಿಗೆ ಬಿಜೆಪಿ ಭ್ರಮನಿರಸನ ಮಾಡಿದೆ. ಬಿಜೆಪಿಗೆ ಪರ್ಯಾಯ ಕಾಂಗ್ರೆಸ್‌ ಪಕ್ಷ ಮಾತ್ರ ಎಂಬ ಭಾವನೆ ಮೂಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಬೇಕು. ಇದಕ್ಕೆ ಕಾರ್ಯಕರ್ತರ ಬಲ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ನಗರದ ಪುರಭವನದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಕಾಂಗ್ರೆಸ್‌ ಬಲ ಕುಂದಿರುವುದು ಸತ್ಯ. ಹಿಂದೆ ಉಳ್ಳಾಲದಿಂದ ಉಡುಪಿವರೆಗೆ ಮಾಡಿದ್ದ ಸದ್ಭಾವನಾ ಯಾತ್ರೆಯನ್ನು ಮತ್ತೊಮ್ಮೆ ಮಾಡಿ ಪಕ್ಷವನ್ನು ಬಲಪಡಿಸೋಣ ಎಂದರು.‌

ಬಿಜೆಪಿ ಸುಳ್ಳಿನ ಪಕ್ಷ. ಜನರ ತಲೆಗೆ ಸುಳ್ಳುಗಳನ್ನು ತುಂಬಿ ಅಧಿಕಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಮುಸ್ಲಿಮರ ಪರ, ಹಿಂದೂ ವಿರೋಧಿಗಳು ಎಂದು ಬಿಂಬಿಸಿದ್ದಾರೆ. ನಾವು ಬಿಜೆಪಿಗರಂತೆ ಡೋಂಗಿ ಹಿಂದುಗಳಲ್ಲ, ಅಪ್ಪಟ ಹಿಂದೂಗಳು. ಮುಸ್ಲಿಂ, ಕ್ರಿಶ್ಚಿಯನ್‌, ಹಿಂದೂಗಳನ್ನು ಒಟ್ಟಾಗಿ ಕರೆದೊಯ್ಯುವ ಪಕ್ಷ ಕಾಂಗ್ರೆಸ್‌ ಎಂದರು.

6 ವರ್ಷಗಳ ಅಧಿಕಾರಾವಧಿಯಲ್ಲಿ ಹೆಸರಿಸಬಹುದಾದ ಯಾವ ಉತ್ತಮ ಕೆಲಸವನ್ನೂ ಬಿಜೆಪಿ ಮಾಡಿಲ್ಲ. ನೋಟು ಅಮಾನ್ಯ, ಜಿಎಸ್‌ಟಿ ಹೆಸರಿನಲ್ಲಿ ಬಡವರಿಗೆ ತೊಂದರೆ ನೀಡಿದ್ದು ಅವರ ಸಾಧನೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್‌, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್‌, ವಿಶುನಾಥನ್‌, ನಾರಾಯಣಸ್ವಾಮಿ, ಗೋಪಾಲ ಪೂಜಾರಿ, ಐವನ್‌ ಡಿಸೋಜಾ, ಯು.ಆರ್.ಸಭಾಪತಿ, ಜಿ.ಎ.ಭಾವಾ, ಎಂ.ಎ.ಗಫೂರ್, ರಂಗಸ್ವಾಮಿ, ರೋಷನಿ ಒಲಿವೆರಾ ಇದ್ದರು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

19 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

19 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

22 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

22 hours ago