Featured

ಮುಸ್ಲಿಂ ಜನಸಂಖ್ಯೆ ಏರುತ್ತಿರುವುದರಿಂದಲೇ ಅತ್ಯಾಚಾರಗಳು ಹೆಚ್ಚುತ್ತಿವೆ : ಬಿಜೆಪಿ ಸಂಸದ ಹರಿ ಓಂ ಪಾಂಡೆ

ಫೈಝಾಬಾದ್​: ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ವೃದ್ಧಿಯಾಗುತ್ತಿರುವುದರಿಂದಲೇ ಇತ್ತೀಚೆಗೆ ಸಮಾಜದಲ್ಲಿ ಅತ್ಯಾಚಾರ, ಕೊಲೆಯಂಥ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಉತ್ತರಪ್ರದೇಶದ ಬಿಜೆಪಿ ಸಂಸದ ಹರಿ ಓಂ ಪಾಂಡೆ ವಿವಾದಿತ ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ಅಂಬೇಡ್ಕರ್​ ನಗರದಿಂದ ಆಯ್ಕೆಯಾಗಿರುವ ಹರಿ ಓಂ ಪಾಂಡೆ, “ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯನ್ನು ನಿಯಂತ್ರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ ಅತಿ ಶೀಘ್ರದಲ್ಲೇ ಪಾಕಿಸ್ತಾನದ ರೀತಿಯಲ್ಲೇ ಮತ್ತೊಂದು ಪ್ರಾಂತ್ಯ ಭಾರತದಿಂದ ವಿಭಜನೆಯಾಗಿ ಪ್ರತ್ಯೇಕ ದೇಶ ರಚನೆ ಮಾಡಿಕೊಳ್ಳಲಿದೆ,” ಎಂದೂ ಹೇಳಿಕೆ ನೀಡಿದ್ದಾರೆ.

“ಭಯೋತ್ಪಾದನೆ, ಅತ್ಯಾಚಾರ, ಲೈಂಗಿಕ ಕಿರುಕುಳ ಭಾರತದಲ್ಲಿ ನಡೆಯುತ್ತಿರುವುದಕ್ಕೆ ಕಾರಣ ಮುಸ್ಲಿಮರ ಜನಸಂಖ್ಯೆ ಹೆಚ್ಚಳ. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಮುಸ್ಲಿಮರ ಜನಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿರುವುದನ್ನು ಯಾರು ಬೇಕಾದರೂ ಗಮನಿಸಬಹುದು,”ಎಂದಿದ್ದಾರೆ.

ಇದಲ್ಲದೆ, ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಭಾರತದ ಆರ್ಥಿಕತೆ ಕುಂಟಿತಗೊಳ್ಳುತ್ತಿದೆ. ಜತೆಗೆ, ನಿರುದ್ಯೋಗ ಸಮಸ್ಯೆಯೂ ಹೆಚ್ಚುತ್ತಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago