Featured

ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ : ಕರ್ನಾಟಕ ಹೈಕೋರ್ಟ್ – Vishwanews24

ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ : ಕರ್ನಾಟಕ ಹೈಕೋರ್ಟ್ – Vishwanews24

ಬೆಂಗಳೂರು: ಮುಸ್ಲಿಂ ಧರ್ಮದಲ್ಲಿ ಮದುವೆ ಎನ್ನುವುದು ಕೇವಲ ಒಪ್ಪಂದ, ಅದು ಸಂಸ್ಕಾರವಲ್ಲ ನಿಜ. ಹಾಗೆಂದ ಮಾತ್ರಕ್ಕೆ ಮೊದಲ ಪತ್ನಿಗೆ ವಿಚ್ಛೇದನ ನೀಡಿದಾಗ ಆಕೆಯನ್ನು ಜೀವನಾಂಶದಿಂದ ಹೊರಕ್ಕೆ ಹಾಕುವಂತಿಲ್ಲ. ಆ ಹೊಣೆಗಾರಿಕೆಯಿಂದ ವಿಚ್ಛೇದಿತ ಪತಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಜತೆಗೆ, ಜೀವನಾಂಶ ಕೊಡದೇ ಪತ್ನಿಯನ್ನು ಸತಾಯಿಸುತ್ತಿದ್ದ ವ್ಯಕ್ತಿಗೆ 25 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ.

ಬೆಂಗಳೂರಿನ ಎಜಾಜುರ್‌ ರೆಹಮಾನ್‌ ಎಂಬ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ತೀರ್ಪು ನೀಡಿದೆ. ಪತ್ನಿಗೆ ವಿಚ್ಛೇದನ ನೀಡಿ ಎರಡನೆಯ ವಿವಾಹವಾಗಿದ್ದಾರೆ ಎಜಾಜುರ್‌. ಇವರು ತಮ್ಮ ಮೊದಲ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಬೇಕು ಎಂದು ಕೌಟುಂಬಿಕ ಕೋರ್ಟ್‌ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದರಿಂದ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ದಂಡ ವಿಧಿಸಿದ್ದಾರೆ.

ಇವರು 1991 ರಲ್ಲಿ ಸಾಯಿರಾ ಬಾನು ಎಂಬುವವನ್ನು ಮದುವೆಯಾಗಿದ್ದರು. ಎಂಟೂವರೆ ತಿಂಗಳ ಬಳಿಕ ತಲಾಖ್‌ ನೀಡಿ 5 ಸಾವಿರ ರೂ. ಮೆಹರ್‌ ನೀಡಿದ್ದರು. 2002 ರಲ್ಲಿ ಸಾಯಿರಾ ಬಾನು ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದರು. ತಿಂಗಳಿಗೆ ಮೂರು ಸಾವಿರದಂತೆ ಜೀವನಾಂಶ ನೀಡುವಂತೆ ಕೋರ್ಟ್‌ ಆದೇಶಿಸಿತ್ತು. ಇದನ್ನು ಇವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

‘ಮುಸ್ಲಿಂ ಕಾನೂನಿನ ಪ್ರಕಾರ ಇಸ್ಲಾಂ ಧರ್ಮದಲ್ಲಿ ವಿವಾಹ ಒಂದು ಸಂಸ್ಕಾರವಲ್ಲ, ಇದು ಒಪ್ಪಂದ. ಗಂಡು ಮತ್ತು ಹೆಣ್ಣಿನ ಕುಟುಂಬಗಳ ನಡುವಿನ ಒಪ್ಪಂದದಂತೆ ವಿವಾಹ ನಡೆಯುತ್ತದೆ. ಹಾಗೆಂದು ದಂಪತಿ ಡಿವೋರ್ಸ್‌ ಕೊಟ್ಟಾಗ ವಿಚ್ಛೇದಿತ ಗಂಡ ತನ್ನ ಕರ್ತವ್ಯದಿಂದ ಮುಕ್ತನಾಗುವುದಿಲ್ಲ. ಎರಡನೇ ಪತ್ನಿ ಹಾಗೂ ಆಕೆಯಿಂದ ಹುಟ್ಟಿದ ಮಕ್ಕಳ ನಿರ್ವಹಣೆ ಮಾಡಬೇಕಿರುವ ಹಿನ್ನಲೆಯಲ್ಲಿ ವಿಚ್ಛೇದನ ನೀಡಿದ ಮೊದಲ ಪತ್ನಿಗೆ ಜೀವನಾಂಶ ನೀಡುವ ಹೊಣೆಗಾರಿಕೆಯಿಂದ ಪತಿ ತಪ್ಪಿಸಿಕೊಳ್ಳುವಂತಿಲ್ಲ. ‘ಮೆಹರ್‌’ ನೀಡಿದಾಕ್ಷಣ ಒಪ್ಪಂದ ಮುಕ್ತಾಯವಾಗುವುದಿಲ್ಲ. ವಿಚ್ಛೇದಿತ ಪತ್ನಿ ಎರಡನೇ ಮದುವೆ ಆಗದಿದ್ದಾಗ ಮತ್ತು ಜೀವನ ನಿರ್ವಹಣೆಗೆ ಅಶಕ್ತಳಾಗಿದ್ದಾಗ “ಇದ್ದತ್‌’ (ತಲಾಕ್‌ ನೀಡಿದ ಬಳಿಕದ ನಾಲ್ಕು ತಿಂಗಳು) ಅವಧಿಯ ಅನಂತರವೂ ಆಕೆ ಜೀವನಾಂಶ ಪಡೆಯುವ ಹಕ್ಕು ಹೊಂದಿದ್ದಾಳೆ ಎಂದು ಹೈಕೋರ್ಟ್‌ ಹೇಳಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago