ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ – Vishwanews24

Featured, ರಾಷ್ಟ್ರ ನ್ಯೂಸ್

ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ – Vishwanews24

ನವದೆಹಲಿ: ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಈದ್ -ಮಿಲಾದ್‌ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್‌ ನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, “ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳ, ಈದ್ ಮಿಲಾದ್ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಇರಲಿ. ಈದ್ ಮುಬಾರಕ್!” ಎಂದು ತಿಳಿಸಿದ್ದಾರೆ.

ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸ್ಯಾಂಡಲ್‍ವುಡ್ ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ದಾದಾ ಸಾಹೇಬ್ ಫಾಲ್ಕೆ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ – Vishwanews24