ಉಡುಪಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಮುಸ್ಲಿಂ ಬ್ರದರ್‌ಹುಡ್‌ ಜತೆ ಆರೆಸ್ಸೆಸ್‌ ; ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್ ಗಾಂಧಿ

ಹೊಸದಿಲ್ಲಿ:  ಅರಬ್‌ ದೇಶಗಳಲ್ಲಿನ ಮುಸ್ಲಿಮ್‌ ಬ್ರದರ್‌ಹುಡ್‌ನ‌ ಸಿದ್ಧಾಂತವನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ವೂ ಹೊಂದಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬರ್ಲಿನ್‌ನಲ್ಲಿ ಹೇಳಿರುವುದು ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಈಜಿಪ್ಟ್ನಲ್ಲಿ ಹುಟ್ಟಿಕೊಂಡ ಮುಸ್ಲಿಂ ಬ್ರದರ್‌ಹುಡ್‌ ಎಂಬ ಸುನ್ನಿ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಪರಿಗಣಿಸಲಾಗಿದ್ದು, ಈಗಾಗಲೇ ರಷ್ಯಾ ಸೇರಿದಂತೆ ಆರಕ್ಕೂ ಹೆಚ್ಚು ದೇಶಗಳಲ್ಲಿ ನಿಷೇಧಗೊಂಡಿದೆ. ಜರ್ಮನಿಯಲ್ಲಿ ಗುರುವಾರ ಮಾತನಾಡಿದ್ದ ರಾಹುಲ್‌, ಅಭಿವೃದ್ಧಿಯಿಂದ ಹಿಂದುಳಿದ ಜನರನ್ನು ಹೊರಗಿಟ್ಟಿದ್ದರಿಂದ ಅವರು ಐಸಿಸ್‌ನಂತಹ ಬಂಡುಕೋರರ ಸಂಘಟನೆ ಸೇರುತ್ತಾರೆ ಎಂದಿದ್ದರು.

ಬರ್ಲಿನ್‌ನಲ್ಲಿ ನಡೆದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ರಾಹುಲ್‌, ದೇಶವನ್ನು ಕಾಂಗ್ರೆಸ್‌ ಒಗ್ಗೂಡಿಸಿದರೆ, ಬಿಜೆಪಿ ಮತ್ತು ಆರೆಸ್ಸೆಸ್‌ ದೇಶವನ್ನು ವಿಭಜಿಸುತ್ತಿವೆ ಎಂದಿದ್ದಾರೆ. ಸುದೀರ್ಘ‌ ಭಾಷಣಗಳಲ್ಲಿ ದ್ವೇಷಯುತ ಹೇಳಿಕೆಗಳನ್ನು ನೀಡಲಾಗುತ್ತಿದ್ದರೆ, ರೈತರು ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಹಾಗೂ ಯುವಕರಿಗೆ ದೇಶದಲ್ಲಿ ಯಾವುದೇ ಭವಿಷ್ಯವೇ ಕಾಣಿಸುತ್ತಿಲ್ಲ ಎಂದೂ ರಾಹುಲ್‌ ಟೀಕಿಸಿದ್ದಾರೆ. ಚೀನಾ 24 ಗಂಟೆಗಳಲ್ಲಿ 50 ಸಾವಿರ ಜನರಿಗೆ ಉದ್ಯೋಗ ನೀಡಿದರೆ, ಈ ಅವಧಿಯಲ್ಲಿ ಭಾರತ ಕೇವಲ 450 ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗಿದೆ ಎಂದಿದ್ದಾರೆ.

ಇನ್ನೊಂದೆಡೆ 2019ರಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ರಾಹುಲ್‌ ಹೇಳಿದ್ದಾರೆ. ಪ್ರಧಾನಿ ಮೋದಿ ಬಿಜೆಪಿ ಆಡಳಿತದ ರಾಜ್ಯಗಳಿಗೆ ಬೆಂಬಲ ನೀಡಿ, ಬಿಜೆಪಿಯೇತರ ರಾಜ್ಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸಲು ಬಯಸುತ್ತಿದ್ದಾರೆ. ಪಾಕಿಸ್ತಾನ ಕುರಿತಂತೆ ಮೋದಿ ಯಾವುದೇ ಸ್ಪಷ್ಟ ನೀತಿಯನ್ನು ಹೊಂದಿಲ್ಲ ಎಂದೂ ಆರೋಪಿಸಿರುವ ರಾಹುಲ್‌, ಡೋಕ್ಲಾಂನಲ್ಲಿ ಚೀನೀ ಸೇನೆ ಇನ್ನೂ ಇದ್ದು, ಪ್ರಧಾನಿ ಮೋದಿ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೂ ದೂರಿದ್ದಾರೆ.

ಪಾಕಿಸ್ತಾನ ಉಗ್ರರ ದಾಳಿ ನಿಲ್ಲಿಸುವವರೆಗೂ ಮಾತುಕತೆ ಅಸಾಧ್ಯ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಅದರ ಅರಿವಿಲ್ಲದೆ, ರಾಹುಲ್‌ ಶಾಂತಿ ಮಾತುಕತೆ ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

 

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

4 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

5 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago