ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಈ ವಿವಾದಕ್ಕೆ ತುಮಕೂರು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದು, ವಿವಾದಕ್ಕೆ ತೆರೆ ಎಳೆದಿದ್ದಾರೆ.
ಮುಸ್ಲಿಂ ರಾಜ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು , ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ ಎಂದು ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಪೇಜಾವರ ಶ್ರೀ ಗಳು ಯಾರೂ ಯಾವ ಹೇಳಿಕೆಯನ್ನಾದರೂ ಕೊಡಬಹುದು. ಆದರೆ ಅಂತಹ ಹೇಳಿಕೆಯನ್ನು ಕೊಡಬೇಕು ಅಂತಾದ್ರೆ ಅದಕ್ಕೆ ಸರಿಯಾದ ಆಧಾರ ನೀಡಬೇಕು. ಮಧ್ವಾಚಾರ್ಯರ ಕಾಲದಲ್ಲಿ ಆ ಘಟನೆ ನಡೆದಿದ್ದು, ಉಡುಪಿಯಲ್ಲಿ ಅಲ್ಲ, ಗಂಗಾ ನದಿ ತೀರದಲ್ಲಿ. ಗುರುಗಳ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಪೇಜಾವರ ಹಿರಿಯ ಶ್ರೀಗಳಾಗಿದ್ದ ಶ್ರೀ ವಿಶ್ವೇಷ ತೀರ್ಥ ಶ್ರೀ ಪಾದರು ಹೇಳಿದ ಒಂದು ವಿಚಾರವನ್ನು ತಪ್ಪಾಗಿ ಗ್ರಹಿಸಿ ಅದನ್ನು ಉಡುಪಿಗೆ ಜೋಡಿಸಲಾಗುತ್ತಿದೆ ಎಂದಿದ್ದಾರೆ. ಇದನ್ನು ಮುಂದುವರೆಸಬೇಡಿ ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಮೂಡಬಿದರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಮಿಥುನ್ ರೈ ಅವರು, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ.
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…