ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸಿದ ಅಸ್ಸಾಂ ಸರ್ಕಾರ – Vishwanews24

Featured, ರಾಷ್ಟ್ರ ನ್ಯೂಸ್

ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಅಸ್ಸಾಂ ಸರ್ಕಾರ 

ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ.

ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜಯಂತ್ ಮಲ್ಲಬರುವ, ಮುಸ್ಲಿಂ ವಿವಾಹ ಕಾಯ್ದೆ ರದ್ದತಿ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ಏಕರೂಪ ನಾಗರಿಕ ಸಂಹಿತೆ ನಿಟ್ಟಿನಲ್ಲಿ ಇದೊಂದು ದೊಡ್ಡ ಹೆಜ್ಜೆ. ಇನ್ನು ಮುಂದೆ ರಾಜ್ಯದಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನೋಂದಣಾಧಿಕಾರಿಗಳು ಮಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ – Vishwanews24

ಸದ್ಯ ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತೆಗೆದುಹಾಕಲಾಗುವುದು. ಅವರೆಲ್ಲರಿಗೂ ತಲಾ 2 ಲಕ್ಷ ರೂಪಾಯಿಗಳ ಒಂದು ಬಾರಿಯ ಪರಿಹಾರವನ್ನು ನೀಡಲಾಗುವುದು ಎಂದು ಮಲ್ಲಬರುವ ಹೇಳಿದರು.

2024ರ ಫೆಬ್ರವರಿ 23ರಂದು ಅಸ್ಸಾಂ ಕ್ಯಾಬಿನೆಟ್ ಹಳೆಯ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಾಯ್ದೆಯು ವಧು ಮತ್ತು ವರರು ಕ್ರಮವಾಗಿ 18 ಮತ್ತು 21 ರ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ನೀಡುವ ನಿಬಂಧನೆಗಳನ್ನು ಒಳಗೊಂಡಿತ್ತು.

ಸಾಲ ಮರು ಪಾವತಿಸದ್ದಕ್ಕೆ ಧರ್ಮಸ್ಥಳ ಸಂಘದವರಿಂದ ಹಲ್ಲೆ, ನಿಂದನೆ ಆರೋಪ : ಮನನೊಂದು ಗೃಹಿಣಿ ಆತ್ಮಹತ್ಯೆ – Vishwanews24

ಈಗ ನಾವು ಕೈಗೊಂಡಿರುವ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸಾಮಾಜಿಕ ಮಾಧ್ಯಮ ಎಕ್ಸ್​​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

Leave a Reply