ಬೆಂಗಳೂರು: ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.
ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್‌ನಲ್ಲಿ ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.
ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ.
ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ. ಸದ್ಯ ಶುರುವಾಗಿರುವ ಅಭಿಯಾನದಿಂದ ಯಾರಿಗೆ ನಷ್ಟ, ಯಾರಿಗೆ ಲಾಭ ಎನ್ನುವ ಲೆಕ್ಕಾಚಾರ ಆರಂಭವಾಗಿದ್ದು, ಒಂದು ವೇಳೆ ಅಭಿಯಾನ ಸಕ್ಸಸ್ ಆದರೆ, ನೂರಾರು ಕೋಟಿ ವ್ಯಾಪಾರಕ್ಕೆ ಕತ್ತು ಬೀಳಲಿದೆ. ಇನ್ನೂ ಈ ಅಭಿಯಾನಕ್ಕೆ ಹಿಂದೂ ಪರ ಸಂಘಟನೆಗಳು ಸಾಥ್ ನೀಡುತ್ತಾರಾ ಕಾದು ನೋಡಬೇಕಾಗಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…