ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ಕನ್ನಡ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.
ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ ಇರುವ ಸಂತ ಶಿಶುನಾಳ ಷರೀಪರ ಪರಂಪರೆ ನಮ್ಮದು. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಸಂತ ರಮಾನಂದರ ಶಿಷ್ಯತ್ವವನ್ನು ಒಪ್ಪಿಕೊಂಡು ಜಗಮೆಚ್ಚಿದ ಸೂಫಿ ಕವಿ ಕಬೀರನೂ ನಮ್ಮದೇ ಪರಂಪರೆಯವರು. ಆದ್ದರಿಂದ ಮುಸ್ಲಿಮ್ ಹೆಸರನ್ನು ನನ್ನ ಹೆಸರಿಗೆ ಜೋಡಿಸುವ ಮೂಲಕ ಜಾತ್ಯತೀತತೆಯ ಮೇಲಿನ ನನ್ನ ನಂಬಿಕೆಯನ್ನು ಅವರು ಪುರಸ್ಕರಿಸಿದ್ದಾರೆಂದು ಎಂದು ತಿಳಿದುಕೊಳ್ಳುವೆ ಎಂದಿದ್ದಾರೆ.
ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ ಎಂದಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…