ಮಂಗಳೂರು : ಮುಸ್ಲಿಂ ಹುಡುಗನಿಂದ ಹಿಂದೂ ಹುಡುಗಿ ಅತ್ಯಾಚಾರಕ್ಕೊಳಗಾದರೆ ಸಂಘಕ್ಕೆ ಆಗುವಷ್ಟು ಖುಷಿ ಯಾರಿಗೂ ಆಗಲ್ಲ ಎಂದು ಭಜರಂಗದಳದ ಮಾಜಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಜನನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಮನಿಂದ ಅತ್ಯಾಚಾರವಾದರೆ ಸಂಘಪರಿವಾರ ಅದರಲ್ಲೇ ಬೆಳೆ ಬೇಯಿಸುತ್ತದೆ. ಆರ್.ಎಸ್.ಎಸ್. ಸಂಘಟನೆ ದಲಿತರ, ಹಿಂದೂ ಸಮಾಜದ ಪರವಾಗಿಲ್ಲ. ಶೋಷಣೆ ವಿರುದ್ಧ ಧ್ವನಿ ಎತ್ತುವುದು ನಿಜವಾದ ಹಿಂದುತ್ವವಾಗಿದೆ. ಆರ್.ಎಸ್.ಎಸ್. ಬಜರಂಗದಳ, ವಿಹೆಚ್ ಪಿ ಹಿಂದೂ ಸಮಾಜ ಅಲ್ಲ. ಬಿಜೆಪಿ ಬತ್ತಳಿಕೆಯಲ್ಲಿ ಎಲ್ಲವೂ ಖಾಲಿಯಾದಾಗ ಅಯೋಧ್ಯೆ ವಿಚಾರವನ್ನು ಮುಂದೆ ಬರುತ್ತದೆ. ಸಂಘ ಪರಿವಾರದಲ್ಲಿರುವ ಜಾತಿ ಅಸ್ಪೃಶ್ಯತೆಯಿಂದಾಗಿ ನಾನು ಸಂಘ ಸಿದ್ಧಾಂತದಿಂದ ವಿಮುಖನಾಗಲು ಒಂದು ಕಾರಣ ಎಂದು ಹೇಳಿದರು.
ದೇಶದಲ್ಲಿ ಹಿಂದೂ ವಿರೋಧಿಯಾಗಿರುವ ಸಂಘಟನೆಯಿದ್ದರೆ ಅದು ಆರ್‌ಎಸ್‌ಎಸ್. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರಿ ಬಿಜೆಪಿ ಅಲ್ಲದೆ ಮತ್ತೇನೂ ಅಲ್ಲ. ಸಂಘದ ವ್ಯಾಪ್ತಿಯಲ್ಲಿರುವ ನೂರಾರು ಸಂಘಟನೆಗಳ ಮೂಲಕ ಕೆಲಸಗಳನ್ನು ಮಾಡಿಸಿಕೊಳ್ಳುತ್ತ ಬಿಜೆಪಿಗೆ ಅಧಿಕಾರ ತಂದುಕೊಡುವುದೇ ಸಂಘದ ಕೆಲಸ.
ಮುಸ್ಲಿಮರನ್ನು ಧರ್ಮದ ಕಾರಣಕ್ಕಾಗಿ ದ್ವೇಷ ಮಾಡುವುದಾದರೆ ಅದು ನಿಜವಾದ ದೇಶದ್ರೋಹ ಎಂದು ಈ ಸಂದರ್ಭದಲ್ಲಿ ಹೇಳಿದರು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…