Featured

ಮುಸ್ಲಿಮರಿಲ್ಲದ ಗ್ರಾಮದಲ್ಲಿ ಪ್ರತಿದಿನ ನಮಾಝ್ ಮಾಡಿ ಮಸೀದಿಯನ್ನು ನಿರ್ವಹಿಸುತ್ತಿರುವ ಹಿಂದುಗಳು -Vishwanews24

ಪಾಟ್ನಾ, : ದೇಶದಲ್ಲಿ ಧರ್ಮಾಂಧತೆ ಹಾಗೂ ಕೋಮು ಗಲಭೆಯ ಘಟನೆಗಳು ಹೆಚ್ಚುತ್ತಿರುವ ನಡುವೆ ಬಿಹಾರದ ನಲಂದಾ ಜಿಲ್ಲೆಯ ಗ್ರಾಮವೊಂದು ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ನಲಂದಾ ಜಿಲ್ಲೆಯ ಮಾಧಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಇಲ್ಲಿನ 200 ವರ್ಷಗಳ ಹಳೆಯ ಮಸೀದಿಯೊಂದರಲ್ಲಿ ಹಿಂದೂಗಳು ಪ್ರತಿದಿನ ಐದು ಬಾರಿ ನಮಾಝ್ ಮಾಡುತ್ತಿದ್ದಾರೆ. ಅಲ್ಲದೆ, ಹಿಂದೂಗಳೇ ಮಸೀದಿಯನ್ನು ನಿರ್ವಹಿಸುತ್ತಿದ್ದಾರೆ.

”ನಮಗೆ (ಹಿಂದೂಗಳು) ಆಝಾನ್ ತಿಳಿದಿಲ್ಲ. ಆದರೆ, ಪೆನ್‌ಡ್ರೈವ್‌ನಲ್ಲಿ ರೆಕಾರ್ಡಿಂಗ್ ಮಾಡಿದ ಆಝಾನ್ ಅನ್ನು ಧ್ವನಿವರ್ಧಕದಲ್ಲಿ ನುಡಿಸಲಾಗುತ್ತದೆ” ಎಂದು ಗ್ರಾಮದ ನಿವಾಸಿ ಹನ್ಸ್ ಕುಮಾರ್ ಹೇಳಿದ್ದಾರೆ. ಮಾಧಿಯಲ್ಲಿ ಗಣನೀಯ ಸಂಖ್ಯೆಯ ಮುಸ್ಲಿಮರು ಇದ್ದರು. ಆದರೆ, ಅವರು ಕ್ರಮೇಣ ವಲಸೆ ಹೋದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

”ಮಸೀದಿ ನಿರ್ವಹಿಸಲು ಯಾರೊಬ್ಬರೂ ಇರಲಿಲ್ಲ. ಆದುದರಿಂದ ಹಿಂದೂಗಳು ಮುಂದೆ ಬಂದರು” ಎಂದು ಮಸೀದಿ ನಿರ್ವಹಿಸುತ್ತಿರುವ ಗೌತಮ್ ಹೇಳಿದ್ದಾರೆ. ಮಸೀದಿಯನ್ನು ಯಾವಾಗ ನಿರ್ಮಾಣ ಮಾಡಲಾಯಿತು ಹಾಗೂ ಯಾರು ನಿರ್ಮಾಣ ಮಾಡಿದರು ಎಂಬ ಬಗ್ಗೆ ಯಾರೊಬ್ಬರಿಗೂ ತಿಳಿದಿಲ್ಲ. ಆದರೆ, ಹಿಂದೂಗಳು ಯಾವುದೇ ಶುಭ ಸಮಾರಂಭದ ಮುನ್ನ ಮಸೀದಿಗೆ ಭೇಟಿ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

”ಮಸೀದಿಯನ್ನು ದಿನನಿತ್ಯ ಸ್ವಚ್ಚಗೊಳಿಸಲಾಗುತ್ತದೆ. ಅಲ್ಲದೆ, ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ತಮಗೆ ಸಮಸ್ಯೆ ಎದುರಾದಾಗ ಕೂಡ ಜನರು ಇಲ್ಲಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ” ಎಂದು ಗ್ರಾಮದ ಅರ್ಚಕ ಜಾಂಕಿ ಪಂಡಿತ್ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago