Featured

ಮುಸ್ಲಿಮರು ಗೋವುಗಳ ರಕ್ಷಣೆಗೆ ಮುಂದಾಗಲಿ ; ‘ಮೋದಿ ಮತ್ತು ಯೋಗಿ ಆದಿತ್ಯನಾಥ್‌ ಮುಸ್ಲಿಂ ವಿರೋಧಿಗಳಲ್ಲ: ರಾಮ್‌ದಾಸ್‌

ನವದೆಹಲಿ: ‘ಗೋ ರಕ್ಷಣೆ ಹೆಸರಿನಲ್ಲಿ ಕೆಲವು ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿದೆ. ಆದರೆ, ಮುಸ್ಲಿಮರು ಸಹ ಗೋವುಗಳ ರಕ್ಷಣೆಗೆ ಸನ್ನದ್ಧರಾಗಬೇಕು’ ಎಂದು ಕೇಂದ್ರ ಸಚಿವ ರಾಮ್‌ದಾಸ್‌ ಆಠವಳೆ ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕುರಿತಾದ ‘ಮುಸಲ್ಮಾನ್‌ ಔರ್‌ ಯೋಗಿ ಆದಿತ್ಯನಾಥ್‌’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದೇಶದ ಬಲವರ್ಧನೆಗೆ ಹಿಂದೂ-ಮುಸ್ಲಿಂ ಸಾಮರಸ್ಯ ಅಗತ್ಯ. ಮೋದಿ ಸರ್ಕಾರ ಅಧಿಕಾರಿಕ್ಕೆ ಬಂದ ನಂತರ ಕೆಲವು ಮುಸ್ಲಿಮರು ಗೋ ರಕ್ಷಣೆ ಹೆಸರಿನಲ್ಲಿ ಕಿರುಕುಳ ಅನುಭವಿಸುತ್ತಿದ್ದಾರೆ. ಆದರೆ, ಮುಸ್ಲಿಮರು ಹಿಂದೂಗಳು ಪೂಜಿಸುವ ಗೋವುಗಳ ರಕ್ಷಣೆಗೆ ಮುಂದಾಗಬೇಕು’ ಎಂದರು.

‘ಮೋದಿ ಮತ್ತು ಯೋಗಿ ಆದಿತ್ಯನಾಥ್‌ ಮುಸ್ಲಿಂ ವಿರೋಧಿಗಳಲ್ಲ. ಎಲ್ಲರೊಂದಿಗೆ, ಎಲ್ಲರ ವಿಕಾಸವೆಂಬ (ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌) ಘೋಷಣೆಯೇ ಇದಕ್ಕೆ ಸಾಕ್ಷಿ’ ಎಂದು ತಿಳಿಸಿದರು.

‘ಆದಿತ್ಯನಾಥ್‌ ಉತ್ತರಪ್ರದೇಶದಲ್ಲಿ ನಕ್ಷತ್ರದಂತೆ ಕಂಗೊಳಿಸುತ್ತಿದ್ದಾರೆ. ಹಿಂದು ಮತ್ತು ಮುಸ್ಲಿಂ ನಡುವೆ ಸಂಘರ್ಷ ಸೃಷ್ಟಿಸುವವರ ಪ್ರಯತ್ನವನ್ನು ವಿಫಲಗೊಳಿಸಬೇಕು. ಅಯೋಧ್ಯೆ ವಿವಾದದ ವಿರುದ್ಧ ಹಿಂದೂ-ಮುಸ್ಲಿಮರು ಕಿತ್ತಾಟ ನಡೆಸದೆ ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ನಿರೀಕ್ಷಿಸಬೇಕು’ ಎಂದರು..

ಈ ಪುಸ್ತಕದ ಲೇಖಕ ಪತ್ರಕರ್ತ ಇರ್ಫಾನ್‌ ಶೈಖ್‌. ಆದಿತ್ಯನಾಥ್‌ ಅವರ ಜೀವನ ಮತ್ತು ಕೆಲಸ, ಅವರ ರಾಜಕೀಯ ವಿಕಸನ ಮತ್ತು ಮುಸ್ಲಿಮರೊಂದಿಗಿನ ಸಂಬಂಧವನ್ನು ಈ ಪುಸ್ತಕ ಒಳಗೊಂಡಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago