ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ : ನಳೀನ್ ಕುಮಾರ್ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ನಗರದ ಓಶಿಯಲ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಮುಸ್ಲಿಂ ಉದ್ಯಮಿಗಳು ಮತ್ತು ಸಂಘ ಸಂಸ್ಥೆಗಳಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿದರು.

ತಾನು ಆರೆಸ್ಸೆಸ್‌ನಿಂದ ಬಂದಿದ್ದೇನೆ. ಆರ್ ಎಸ್ ಎಸ್ ಶಾಖೆಯಲ್ಲಿ ರಾಷ್ಟ್ರಭಕ್ತಿಯ ಬಗ್ಗೆ ಪಾಠ ಕಲಿತಿದ್ದೇನೆ, ಹಾಗೂ ಮನುಷ್ಯನಲ್ಲಿ ದೇವರನ್ನು ಕಾಣು ಎಂಬುದನ್ನು ಶಾಖೆಯಲ್ಲಿ ಕಲಿಸಿಕೊಟ್ಟಿದ್ದಾರೆ. ಜಿಲ್ಲೆಯ ಹಿಂದು- ಮುಸ್ಲಿಮರ ಮಧ್ಯೆ ಅನ್ಯೋನ್ಯ ಸಂಬಂಧ ಇತ್ತು. ರಾಜಕೀಯದ ಲಾಭಕ್ಕಾಗಿ ಮತ ಬ್ಯಾಂಕ್ ಗಳಿಸಲು ಅಂತರ ಹೆಚ್ಚಿದೆ. ಮಸೀದಿಗೆ ಬಂದು ನಾಟಕ ಮಾಡಿ, ಸುಳ್ಳು ಹೇಳುವ ವ್ಯಕ್ತಿ ನಾನಲ್ಲ. ಮುಸ್ಲಿಮರು ತನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.