ನವದೆಹಲಿ: ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ ನಾವು ಹನುಮಾನ್ ಚಾಲೀಸಾ ಪಠಿಸೋಕೆ ಮಂಗಳವಾರ ರಸ್ತೆ ತಡೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಪಶ್ಚಿಮ ಬಂಗಾಳ ಹೌರಾ ಜಿಲ್ಲಾಧ್ಯಕ್ಷ ಒ.ಪಿ. ಸಿಂಗ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರು ಗ್ರಾಂಡ್ ಟ್ರಂಕ್ ರೋಡ್ ಸೇರಿ ಹಲವು ಪ್ರಮುಖ ರಸ್ತೆಗಳನ್ನು ಬಳಸಿಕೊಂಡು, ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಸಕಾಲದಲ್ಲಿ ಕಚೇರಿ ತಲುಪಲು ಜನರಿಗೆ ತೊಂದರೆಯಾಗುತ್ತಿದೆ. ಈ ಪದ್ಧತಿ ಎಲ್ಲಿಯವರೆಗೂ ಮುಂದುವರೆಯುತ್ತದೋ ಅಲ್ಲಿಯವರೆಗೆ ನಾವು ಕೂಡ ಪ್ರತಿ ಮಂಗಳವಾರ ಪ್ರಮುಖ ರಸ್ತೆಗಳಲ್ಲಿ ಕುಳಿತು ಹನುಮಾನ ಚಾಲೀನಾ ಪಠಿಸಿ, ಜನ, ವಾಹನಕ್ಕೆ ಸಂಚರಕ್ಕೆ ಅಡ್ಡಿಪಡಿಸಲಿದ್ದೇವೆ ಎಂದು ಹೇಳಿದ್ದಾರೆ.
ಹೌರಾ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿರುವ ಹನುಮಾನ ದೇಗುಲಗಳಲ್ಲಿ ಪ್ರತಿ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಅವುಗಳ ಎದುರಿನ ರಸ್ತೆಯಲ್ಲೇ ಕುಳಿತು ಹನುಮಾನ ಚಾಲೀಸಾ ಪಠಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…