Featured

ಮೂಡಬಿದಿರೆ: ಇನ್‌ಸ್ಟಾಗ್ರಾಂ ಪ್ರೀತಿ ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ – vishwanews24

ಮೂಡಬಿದಿರೆ: ಇನ್‌ಸ್ಟಾಗ್ರಾಂ ಪ್ರೀತಿ ; ವಿವಾಹಿತ ಮಹಿಳೆ ಮತ್ತು ಪ್ರಿಯಕರ ಆತ್ಮಹತ್ಯೆ

ಮೂಡಬಿದಿರೆ: ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕಮಿಜಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬಡಗುಮಿಜಾರು ಗ್ರಾಮದ ಮರಕಡ ಬಳಿ ಮೇ 28 ರಂದು ನಡೆದಿದೆ.

ಮೃತಪಟ್ಟವರನ್ನು ಬಡಗುಮಿಜಾರಿನ ನಮಿಕ್ಷಾ ಶೆಟ್ಟಿ (29) ಮತ್ತು ಆಕೆಯ ಪ್ರಿಯಕರ ಪ್ರಶಾಂತ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ಮೂಲತಃ ನಿಡೋಡಿಯವರಾಗಿದ್ದು, ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನಮಿಕ್ಷಾ ವಿವಾಹಿತರಾಗಿದ್ದು, ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆಕೆಯ ಪತಿ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮೂಲತಃ ಬಾಗಲಕೋಟೆಯವರಾದ ಪ್ರಶಾಂತ್ ಕೂಡ ವಿವಾಹಿತರಾಗಿದ್ದರು ಎಂದು ಹೇಳಲಾಗಿದೆ.

ಇಬ್ಬರೂ ಇನ್‌ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದು, ಅವರ ಸ್ನೇಹ ಕ್ರಮೇಣ ಪ್ರೀತಿ ಸಂಬಂಧವಾಗಿ ಬೆಳೆದಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅವರಿಬ್ಬರ ನಡುವೆ ಜಗಳ ನಡೆದಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬಾವಿಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಮಿಕ್ಷಾ ಅವರ ತಂದೆ ಮತ್ತು ಪ್ರಶಾಂತ್ ಅವರ ಸಹೋದರ ಪ್ರತ್ಯೇಕವಾಗಿ ನೀಡಿದ ದೂರುಗಳ ಆಧಾರದ ಮೇಲೆ ಮೂಡಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago