Featured

ಮೂಡಬಿದಿರೆ : ಕಾರು – ಬೈಕ್  ಅಪಘಾತ ; ಯುವಕ ಬಲಿ -vishwanews24

ಮೂಡಬಿದಿರೆ : ಕಾರು – ಬೈಕ್  ಅಪಘಾತ ; ಯುವಕ ಬಲಿ

ಮೂಡಬಿದಿರೆ : ಹುಟ್ಟು ಹಬ್ಬದ ಹಿಂದಿನ ದಿನವೇ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.

ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.

ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ.

ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಆಸು ನೀಗಿದ್ದಾರೆಂದು ತಿಳಿದು ಬಂದಿದೆ.

ಇನ್ನು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಮೃತ ಪ್ರದೀಪ್ ಅವರು ಇಂದು ತನ್ನ 39ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

28 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago