ಮೂಡಬಿದಿರೆ : ಮೂಡಬಿದಿರೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಆರೋಪಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಪ್ರಭಾವ ಬಳಿಸಿ ಬಿಡುಗಡೆಗೊಳಿಸಿದ್ದು, ಇದು ಹಾಲಿ ಶಾಸಕರು ನೈತಿಕ ಪೊಲೀಸ್ ಗಿರಿಗೆ ನೇರ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ ಆರೋಪಿಸಿದ್ದಾರೆ.
ಮೂಡಬಿದಿರೆಯಲ್ಲಿ ಮಾತನಾಡಿದ ಅವರು ಹಿಂದೂ ಮಹಿಳೆಯರಿಬ್ಬರು ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ಮಹಿಳೆಯರಿಗೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ವತಃ ಸ್ಥಳೀಯ ಹಾಲಿ ಶಾಸಕರು ಠಾಣೆಗೆ ತೆರಳಿ ತನ್ನ ಪ್ರಭಾವ ಬಳಸಿ ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಆರೋಪಿ ಈ ಘಟನೆಯ ಪೋಟೋವನ್ನು ತನ್ನ ಸ್ಟೇಟಸ್‌ನಲ್ಲಿ ಹಾಕಿ ಸಂಭ್ರಮಿಸಿ ಕಾನೂನಿಗೆ ಸವಾಲೊಡ್ಡಿದ್ದಾರೆ ಎಂದು ದೂರಿದರು. ಈಗಿನ ಶಾಸಕರು ಬೆಂಬಲ ನೀಡುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದರು.
ಈ ಬಗ್ಗೆ ಜಿಲ್ಲಾ ಪೊಲೀಸ್ ಕಮಿಷನರ್‌ಗೆ ದೂರು ನೀಡಲಾಗುವುದು. ಅಲ್ಲದೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯರ ಮೂಲಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…