ಮಂಗಳೂರು: ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಮಹಿಳೆಯೊಬ್ಬರು ಆರೋಪಿಸಿದ್ದು, ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಕುರಿತಾಗಿ ಬಂದಿರುವ ವಿಷಯದ ಬಗ್ಗೆ ಉತ್ತರ ವಿಭಾಗದ ಎಸಿಪಿ ಅವರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್‌ಸ್ಪೆಕ್ಟರ್ ವಿರುದ್ಧ ಇದುವರೆಗೆ ಯಾವುದೇ ಮಹಿಳೆ ಲೈಂಗಿಕ ಕಿರುಕುಳದ ಕುರಿತು ನೇರವಾಗಿ ದೂರು ನೀಡಿಲ್ಲ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:
ಇಬ್ಬರು ಸಹೋದರಿಯರ ನಡುವೆ ಕೆಲವು ವೈಯಕ್ತಿಕ ವಿವಾದವಿದ್ದು, ಆ ವಿಚಾರದಲ್ಲಿ ಇನ್ಸ್ಪೆಕ್ಟರ್ ಮತ್ತೊಂದು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಆ ಪ್ರಕರಣ ಈಗ ನ್ಯಾಯಾಲಯದಲ್ಲಿದ್ದು, ಅಲ್ಲಿ ನಡೆದ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನ ಕಸ್ಟಡಿಯನ್ನು ತಾಯಿಗೆ ನೀಡಲಾಗಿದೆ. ಆದ್ದರಿಂದ ಆ ವಿಷಯದಲ್ಲಿ ಇನ್ಸ್ಪೆಕ್ಟರ್ ಕೈಗೊಂಡ ಕ್ರಮ ಕಾನೂನುಬದ್ಧವಾಗಿರುವುದರಿಂದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
ಯಾವುದೇ ಪೀಡಿತ ಮಹಿಳೆ ಮುಂದೆ ಬಂದು ದೂರು ನೀಡಲು ಇಚ್ಛಿಸಿದರೆ ಅವರಿಗೆ ಅವಕಾಶವಿದ್ದು, ಅಂತಹ ದೂರು ಬಂದರೆ ಅದರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸಂಬಂಧವಿಲ್ಲದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಮೂರನೇ ವ್ಯಕ್ತಿಯಾದ ಮಹಿಳೆಯ ವೈಯಕ್ತಿಕ ಸಂಬಂಧಗಳ ಬಗ್ಗೆ ವಿಚಾರಣೆ ನಡೆಸುವುದು ಗೌಪ್ಯತೆ ಉಲ್ಲಂಘನೆಯ ಪ್ರಶ್ನೆಯನ್ನು ಎಬ್ಬಿಸಬಹುದು ಎಂಬುದನ್ನೂ ಅವರು ಹೇಳಿದ್ದಾರೆ.
ಇದನ್ನೂ ಓದಿ:
ಇದಲ್ಲದೆ, ದೂರುದಾರರು ಕಚೇರಿಗೆ ಬಂದಾಗ ತೋರಿಸಿದ್ದ ವಿಡಿಯೋದಲ್ಲಿ ಇನ್‌ಸ್ಪೆಕ್ಟರ್ ಗೋಡೆ ಹಾರಿರುವ ದೃಶ್ಯ ಮಾತ್ರ ಕಂಡಿದ್ದು, ಆ ಮನೆಯ ಮಾಲೀಕರಿಂದ ಯಾವುದೇ ದೂರು ಇಲ್ಲದ ಹಿನ್ನೆಲೆಯಲ್ಲಿ ಆ ವಿಚಾರದಲ್ಲೂ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ. ಈ ನಡುವೆ ಕೆಲವು ಆಡಿಯೋಗಳು ಹೊರಬಂದಿರುವ ಕುರಿತು ತಮಗೆ ಹೊಸ ಮಾಹಿತಿ ಸಿಕ್ಕಿರುವುದಾಗಿ ಹೇಳಿದ ಅವರು, ಎಸಿಪಿ ನಡೆಸುವ ತನಿಖೆಯ ವರದಿ ಬಳಿಕ ವಾಸ್ತವಾಂಶಗಳು ಸ್ಪಷ್ಟವಾಗಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…