ಮಂಗಳೂರು: ಮೂಡಬಿದ್ರೆಯಲ್ಲಿ ರೈತರ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ. 10ರಂದು ಪಕ್ಷಾತೀತ ಪ್ರತಿಭಟನೆ ನಡೆಸಲಾಗಿತ್ತು. ರಾಜ್ಯ ಸರಕಾರ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸದಿದ್ದರೆ ನ. 28ರಂದು ಮೂಡಬಿದ್ರೆ ಕಿಸಾನ್ ಘಟಕದ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟಿಸಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗುರುವಾರ ಮೂಡಬಿದಿರೆ ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಿದೆ ಎಂದರು.
ಕಾಸರಗೋಡು: ದಂತ ವೈದ್ಯ ಎಸ್. ಕೃಷ್ಣಮೂರ್ತಿ ನಿಗೂಢ ಸಾವು ಪ್ರಕರಣ : ಐವರ ಬಂಧನ – Vishwanews24
ಅಕ್ರಮ ಸಕ್ರಮೀಕರಣ ಕಾಯಿದೆಯಡಿ ಅರ್ಜಿ ನಮೂನೆ 50,53, 57ರಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ರೈತರಿಗೆ ತಕ್ಷಣ ತಮ್ಮ ಸ್ವಾಧೀನದ ಕೃಷಿ ಭೂಮಿಯನ್ನು ಒದಗಿಸಲು ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. 94 ಸಿ, 94 ಸಿಸಿ ಯಡಿ ಅರ್ಜಿ ಸಲ್ಲಿಸಿರುವ ಬಡವರಿಗೆ ಮನೆಯ ಹಕ್ಕು ಪತ್ರ ಒದಗಿಸಬೇಕು. ಮನಪಾ, ಪಟ್ಟಣ ಪಂಚಾಯತ್, ನಗರ ಪಂಚಾಯತ್, ಪುರಸಭೆ ವ್ಯಾಪ್ತಿಯ 3 ಕಿ.ಮೀ. ವ್ಯಾಪ್ತಿಯ ಒಳಗೆ ಅಕ್ರಮ- ಸಕ್ರಮ ಅರ್ಜಿ ಸಲ್ಲಿಸಿರುವ ರೈತರಿಗೆ ತಮ್ಮ ಸ್ವಾಧೀನದ ಭೂಮಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟಿಸಿದ್ದು, ಈ ಬೇಡಿಕೆಯನ್ನು ಸರಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
ರೈತರ ಜಮೀನಿನಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸುವ ರೈತ ವಿರೋಧಿ ಕೃತ್ಯಗಳ ವಿರುದ್ಧ ರೈತರ ಪರವಾಗಿ ಕಾಂಗ್ರೆಸ್ ಹೋರಾಟವನ್ನು ನಿರಂತವಾಗಿ ಮುಂದುವರಿಸಲಿದೆ. ಬಳ್ಕುಂಜೆಯ 1000 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ ವಿಚಾರದ ಬಗ್ಗೆಯೂ ಕಾಂಗ್ರೆಸ್ ರೈತರ ಪರ ಹೋರಾಡಲಿದೆ ಎಂದರು.
ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ – Vishwanews24
ಗೋಷ್ಠಿಯಲ್ಲಿ ವಲೇರಿಯನ್ ಸಿಕ್ವೇರಾ, ರಾಜೇಶ್ ಕಡಲ್ಕೆರೆ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…