ಮೂಡಬಿದ್ರೆ,: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ನಡೆದಿದೆ.
ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಮೃತಪಟ್ಟವರು. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.
ಸ್ಥಳೀಯರು ಕೂಡಲೇ ಅಲಂಗಾರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದರು. ಮೃತರ ಸಹೋದರ ನೀಡಿದ ದೂರಿನಂತೆ ಪೊಲಿಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿದ್ದಾರೆ.
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…