ಮೂಡುಬಿದಿರೆ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಖಾಸಗಿ ಬಸ್‌ಬೈಕ್‌ಗೆ ಸೋಮವಾರ ಸಾಯಂಕಾಲ ಢಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲರ್ಸ್‌ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ (19) ಮೃತಪಟ್ಟವರು.
ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು.
ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಅಮಾಯಕ ಜೀವ ಬಲಿಯಾಗಿದೆ. ಮೂಡುಬಿದಿರೆ ಪೊಲೀಸರು ಬಸ್‌ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…