Featured

ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಡಿ. 31 ರಿಂದ ಜ. 2 ರವರೆಗೆ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ – Vishwanews24

ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಡಿ. 31 ರಿಂದ ಜ. 2 ರವರೆಗೆ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ – Vishwanews24

ಮಂಗಳೂರು: ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ.

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಆಳ್ವಾಸ್‌ ವಿರಾಸತ್‌ ಮತ್ತು ನುಡಿಹಬ್ಬವಾದ ಆಳ್ವಾಸ್‌ ನುಡಿಸಿರಿ ಪ್ರತಿ ವರ್ಷ ಲಕ್ಷಾಂತರ ಮಂದಿ ಈ ವೈಭವವನ್ನು ಕಣ್ತುಂಬಿಕೊಳ್ಳಲು ನಿರೀಕ್ಷೆಯಿಂದ ಕಾಯುತ್ತಿದ್ದರು. ಆದರೆ ಕೊರೊನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಈ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಈ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ 2021ರ ಡಿಸೆಂಬರ್‌ 31ರಂದು ಆಳ್ವಾಸ್‌ ವಿರಾಸತ್‌ ಮತ್ತು ಆಳ್ವಾಸ್‌ ನುಡಿಸಿರಿ ಕಾರ್ಯಕ್ರಮ ಉದ್ಘಾಟನೆಗೊಂಡು, 2022ರ ಜ.2ರವರೆಗೆ ಮುಂದುವರಿಯಲಿದೆ. ಹಗಲಿನ ಹೊತ್ತು ವಿದ್ಯಾಗಿರಿಯಲ್ಲಿ ನುಡಿಸಿರಿ ನಡೆದರೆ, ಸಂಜೆ ವೇಳೆ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ಆಳ್ವಾಸ್‌ ವಿರಾಸತ್‌ ವೈಭವಿಸಲಿದೆ.

ವಿರಾಸತ್‌ ಮತ್ತು ನುಡಿಸಿರಿ ಶೈಲಿಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಕೋವಿಡ್‌ ಮಾರ್ಗಸೂಚಿ ಈಗಲೂ ಜಾರಿಯಾಗಿರುವ ಕಾರಣ ಇಡೀ ಕಾರ್ಯಕ್ರಮವನ್ನು ವೈಭವಕ್ಕೆ ವಿಶೇಷ ಆದ್ಯತೆ ನೀಡಿದರೆ, ಅರ್ಥಪೂರ್ಣವಾಗಿ ಮಾಡಲು ನಿರ್ಧರಿಸಲಾಗಿದೆ. ನುಡಿಸಿರಿ ಮತ್ತು ವಿರಾಸತ್‌ ಬಗ್ಗೆ ಆಸಕ್ತಿಯಿರುವವರು ಮಾತ್ರ ಬರಬೇಕೆಂಬುದು ನಮ್ಮ ನಿರೀಕ್ಷೆ. ನುಡಿಸಿರಿ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ 3 ಸಾವಿರ ಮಂದಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದ್ದು, ವಿರಾಸತ್‌ ಪುತ್ತಿಗೆಯಲ್ಲಿ ನಡೆಯುವ ಕಾರಣ ಯಾವುದೇ ನಿಬಂಧನೆಗಳನ್ನು ಹಾಕುತ್ತಿಲ್ಲ ಎನ್ನುತ್ತಾರೆ ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್‌ ಆಳ್ವ

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

2 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

2 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

4 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago