ಮೂಡುಬಿದಿರೆ: ಸೋಮವಾರ ಸಂಜೆ ರಾ.ಹೆ. 169 ಹಾದುಹೋಗುವ ತೋಡಾರ್‌ನ ಹಂಡೇಲು ಬಳಿ ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದು ಆಳ್ವಾಸ್ ಕಾಲೇಜು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟ ಘಟನೆಗೆ ಪ್ರತಿಯಾಗಿ, ಚಾಲಕನ ನಿರ್ಲಕ್ಷ್ಯವನ್ನು ಖಂಡಿಸಿ ಮುಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಸಂಜೆ ವಿದ್ಯಾಗಿರಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.
ವರುಷದಲ್ಲಿ ಹತ್ತಕ್ಕೂ ಅಧಿಕ ಬಲಿ:
ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ.
ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸುವವರ ವಿರುದ್ದ ಕಠಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ತಿಕ್ ಆಚಾರ್ಯ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಕೀಲ ಶಾಂತಿಪ್ರಸಾದ್ ಹೆಗ್ಡೆ ಆಗ್ರಹಿಸಿದರು.
ಮನವಿ:
ಮೂಡುಬಿದಿರೆ ವಲಯದ ಎಲ್ಲ ಬಸ್ ಚಾಲಕರು ಕಟ್ಟು ನಿಟ್ಟಾಗಿ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಿಶೇಷ ಜನಸಂಚಾರವಿರುವ ಪ್ರದೇಶಗಳಲ್ಲಿ ವೇಗಕ್ಕೆ ಕಡಿವಾಣ ಹಾಕಬೇಕು. ಆಳ್ವಾಸ್ – ವಿದ್ಯಾಗಿರಿ ಬಳಿ ಹೆದ್ದಾರಿಗೆ ಹಂಪ್ಸ್ ಹಾಕಬೇಕು. ಶಾಲಾ ಕಾಲೇಜುಗಳ ಬಳಿ ಡಿವೈಡರ್‌ಗಳನ್ನು ಅಳವಡಿಸಿ ಬಸ್ಸುಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿಯನ್ನು ವಿದ್ಯಾರ್ಥಿಗಳು ಪೋಲೀಸ್ ವೃತ್ತ ನಿರೀಕ್ಷಕ ನಿರಂಜನ್ ಅವರಿಗೆ ನೀಡಿದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳ ಗಮನಸೆಳೆದು ಸೂಕ್ತ ಕ್ರಮ ಜರಗಿಸುವುದಾಗಿ ನಿರಂಜನ್ ಭರವಸೆ ಇತ್ತರು. ರಸ್ತೆ ನಿಯಮ ಪಾಲಿಸದ, ಆತಿವೇಗದಲ್ಲಿ ವಾಹನ ಚಲಾಯಿಸುವ ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಗಿ ಕಳೆದೊಂದು ವರ್ಷದಿಂದ ನೂರೈವತ್ತಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಜರಗಿಸಲಾಗಿದೆ ಎಂದು ನಿರಂಜನ್ ತಿಳಿಸಿದರು.
ಸಂಜೆ ಗಂ.4ರಿಂದ 4.30ರ ವರೆಗೆ ವಿದ್ಯಾಗಿರಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾಯಿಸಿದ್ದು ಪೊಲೀಸರು ಇರುವ ಸ್ಥಳಾವಕಾಶದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲು ಬಹಳ ಶ್ರಮಪಟ್ಟರು. ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಬುಧವಾರ ಎಡಪದವಿನಲ್ಲಿ ಪ್ರತಿಭಟನೆ
ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ಕಾರ್ತಿಕ್ ಸಾವಿನ ಘಟನೆಯನ್ನು ಖಂಡಿಸಿ ಎಡಪದವು – ಮಿಜಾರು ಪರಿಸರದ ನಾಗರಿಕರಿಂದ ಜೂನ್ 7 ರಂದು ಬೆಳಿಗ್ಗೆ 8.30 ಕ್ಕೆ ಎಡಪದವು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…