ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿರುವುದು ವರದಿಯಾಗಿದೆ.
ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.
ಪ್ರೌಢಶಾಲೆಯಲ್ಲಿ ಓದುತ್ತಿರುವ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಗುರುವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…