ಮೂಡುಬಿದಿರೆ : ಈ ತಿಂಗಳ 23ರಿಂದ ಜಪಾನಿನ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ ತಂಡದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ ಆಯ್ಕೆಯಾಗಿದ್ದು, ಇವರು 4×400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಕೂಟಗಳಲ್ಲಿ ಪ್ರತಿನಿಧಿಸಿರುವ ಇವರಿಬ್ಬರು ಈಗಾಗಲೇ ಅನೇಕ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿದ್ದಾರೆ.
ಒಲಿಂಪಿಕ್ಸ್‌ಗೆ ಆಯ್ಕೆಯಾದ ಇಬ್ಬರು ಈ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಲಾ ಒಂದು ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…