ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 15ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2025 ಕಾರ್ಯಕ್ರಮ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಆಳ್ವಾಸ್ ನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ರ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ. ಯಾವುದೇ ಕೋರ್ಸುಗಳನ್ನು 20250 ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವೀ ಅಭ್ಯರ್ಥಿಗಳು ಕೂಡಾ ಭಾಗವಹಿಸ ಬಹುದಾಗಿದೆ ಎಂದರು. ಈಗಾಗಲೇ 285 ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಇದರಲ್ಲಿ 15950 ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇರಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ತರಬೇತಿ ಮತ್ತು ನಿಯೋಜನೆ ವಿಭಾಗದ ಮುಖ್ಯಸ್ಥರಾದ ರಂಜಿತಾ ಆಚಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…