ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪ ಇರುವ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಂದಿನ ಶನಿವಾರ ‘ಸಂಪ್ರದಾಯ’ ದಿನ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬುಧವಾರ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಗುಂಪು ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಬುಧವಾರ ನಡೆದ ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ 40 ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…