Featured

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಎಂದು ಗುರುತಿಸಲಾಗಿದೆ.

ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ‌.

ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

18 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago