ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿಯಾದ ಘಟನೆ ಗುರುವಾರ(ಮೇ28)ಸಂಭವಿಸಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿದೆ. ಕಾಂತಾವರ ಕ್ರಾಸ್ ಬಳಿಯ ಯು ಟರ್ನ್ ಅನ್ನು ಬುಧವಾರದಿಂದ ಬಂದ್ ಮಾಡಲಾಗಿದೆ.
ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಹೋಗುವ ಕ್ರಾಸ್ ರಸ್ತೆಯನ್ನು ಏಕಾಏಕಿ ಬಂದ್ ಮಾಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರಿ ಗೊಂದಲ ನಿರ್ಮಾಣವಾಗಿದೆ. ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಕಾಂತಾವರ ಕಡೆಯಿಂದ ಬರುವ ವಾಹನಗಳು ಬೆಳುವಾಯಿ
ಪೇಟೆಗೆ ಹೋಗಲು ಹರಸಾಹಸ ಪಡಬೇಕಾಗಿದೆ.
ವಾಹನ ಸವಾರರು ಅನಿವಾರ್ಯವಾಗಿ ಚಿಲಿಂಬಿ ತನಕ ಹೋಗಿ, ಅಲ್ಲಿಂದ ವಾಹನವನ್ನು ತಿರುಗಿಸಿಕೊಂಡು ಬರಬೇಕಾದ ಪರಿಸ್ಥಿತಿ ಎದುರಾಗಿದೆ. ನಿಯಮಾವಳಿಗಳಿಲ್ಲದೆ ಏಕಾಏಕಿ ರಸ್ತೆ ಬಂದ್ ಮಾಡಿರುವುದರಿಂದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…