ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು 

ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್ ಎಂಬವರು ಈ ಕಾರನ್ನು ಇತ್ತೀಚೆಗೆ ಖರೀದಿಸಿದ್ದರು. ಮಸೂದ್ ಅವರು ತಮ್ಮ ಕುಟುಂಬದೊಂದಿಗೆ ಮೂಡುಬಿದಿರೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವಾಹನವು ಹಳೆ ಪುರಸಭೆ ಕಟ್ಟಡದ ಬಳಿ ತಲುಪುತ್ತಿದ್ದಂತೆ, ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಕಾರನ್ನು ನಿಲ್ಲಿಸಿ, ಮಹಿಳೆಯರು ಮತ್ತು ಮಕ್ಕಳನ್ನು ಹೊರಕ್ಕೆ ಕರೆತಂದರು. ಕೆಲವೇ ಕ್ಷಣಗಳಲ್ಲಿ ಕಾರು ದಗದಗನೆ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply