ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್ ಎಂಬವರು ಈ ಕಾರನ್ನು ಇತ್ತೀಚೆಗೆ ಖರೀದಿಸಿದ್ದರು. ಮಸೂದ್ ಅವರು ತಮ್ಮ ಕುಟುಂಬದೊಂದಿಗೆ ಮೂಡುಬಿದಿರೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ವಾಹನವು ಹಳೆ ಪುರಸಭೆ ಕಟ್ಟಡದ ಬಳಿ ತಲುಪುತ್ತಿದ್ದಂತೆ, ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಕಾರನ್ನು ನಿಲ್ಲಿಸಿ, ಮಹಿಳೆಯರು ಮತ್ತು ಮಕ್ಕಳನ್ನು ಹೊರಕ್ಕೆ ಕರೆತಂದರು. ಕೆಲವೇ ಕ್ಷಣಗಳಲ್ಲಿ ಕಾರು ದಗದಗನೆ ಹೊತ್ತಿ ಉರಿದಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…