ಮೂಡುಬಿದಿರೆ: ಬೃಹತ್ ಕ್ರೇನ್ ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮವಾಗಿ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ.
ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಫೆಲಿಕ್ಸ್ ರೊಡ್ರಿಗಸ್ ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ.
ಘಟನೆ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೀಡಾದ ಸಂದರ್ಭ ಕ್ರೇನ್ ನ ತುಂಡೊಂದು ಅದೇವೇಳೆ ಆ ರಸ್ತೆಯಾಗಿ ಸಂಚರಿಸುತ್ತಿದ್ದ ಕಾರೊಂದು ಮೇಲೆ ಬೀಳುವುದರಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…