ಮೂಡುಬಿದಿರೆ: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಲ್ಲಿನ ಒಂಟಿಕಟ್ಟೆಯ ಜೋಡುಕರೆ ಕಂಬಳ ಸಮಿತಿಯ ಆಯೋಜಿಸಿರುವ 17ನೇ ವರ್ಷದ ಕೋಟಿ-ಚೆನ್ನಯ ಕಂಬಳ ಉದ್ಘಾಟನೆ ಹಾಗೂ ವೀರರಾಣಿ ಅಬ್ಬಕ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು
ಮೂಡುಬಿದಿರೆಯನ್ನು ಈಗಾಗಲೇ ತಾಲೂಕಾಗಿ ಘೋಷಿಸಲಾಗಿದೆ. ಹೆಚ್ಚಿನ ಅನುದಾನ ನೀಡಿ ಇದನ್ನು ಮಾದರಿ ಕ್ಷೇತ್ರವನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಗೃಹಸಚಿವ ಬಸವರಾಜ್ ಬೊಮ್ಮಾಯಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸಿ.ಟಿ.ರವಿ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಸುನೀಲ್‌ಕುಮಾರ್, ಹರೀಶ್ ಪೂಂಜಾ, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕರಾದ ಬಿ.ನಾಗರಾಜ ಶೆಟ್ಟಿ, ಯೋಗೀಶ್ ಭಟ್, ರುಕ್ಮಯ ಪೂಜಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಿಶೋರ್ ಆಳ್ವ, ಬೃಜೇಶ್ ಚೌಟ, ಈಶ್ವರ್ ಕಟೀಲು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಎಡಿಸಿ ರೂಪಾ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…