ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ನನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್ ರಾಡ್‌ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.
ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್‌ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…