ಮೂಡುಬಿದಿರೆ: ಇಲ್ಲಿನ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಸಿ.ಎ. ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಮೃತಪಟ್ಟವರು.
ಮಂಗಳೂರಿನ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್(22) ಹಾಗೂ ಮನೋಜ್ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಮನೋಜ್ ಆಕಸ್ಮಿಕವಾಗಿ ಗುಡ್ಡದಿಂದ ಜಾರಿಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…