ಮೂಡುಬಿದಿರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ; ಸವಾರ ಮೃತ್ಯು – vishwanews24
ಮೂಡುಬಿದಿರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ; ಸವಾರ ಮೃತ್ಯು
ಮೂಡುಬಿದಿರೆ : ಖಾಸಗಿ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ವರದಿಯಾಗಿದೆ.
ತೋಡಾರು ನಿವಾಸಿ ರಿಫಾಝ್ (19) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಮೂಡುಬಿದಿರೆಯಲ್ಲಿ ಹಣ್ಣು ಹಂಪಲು ಮಾರಾಟದ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಹೊಸ ವಂದೇ ಭಾರತ್ಗೆ ರೈಲಿಗೆ ಸುರತ್ಕಲ್ ನಿಲುಗಡೆ ಘೋಷಿಸಬೇಕು : ಪ್ರಯಾಣಿಕರ ಆಗ್ರಹ – vishwanews24
ಅಭಿಮಾನ್ ಎಂಬ ಹೆಸರಿನ ಖಾಸಗಿ ಬಸ್ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಸರ್ವಿಸ್ ರಸ್ತೆಯ ಮೂಲಕ ಬರಬೇಕಾಗಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಿಫಾಝ್ ಸಂಚರಿಸುತ್ತದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ರಿಫಾಝ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಸ್ಟಿಂಗ್ ಆಪರೇಷನ್’ ಪ್ರಕರಣ : ಕಾಂಗ್ರೆಸ್ ನಿಂದ ಕೃಪಾ ಆಳ್ವಾ ಉಚ್ಛಾಟನೆ – vishwanews24
ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
