ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ– 2026 ರ 16 ನೇ ಆವೃತ್ತಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 7 ಹಾಗೂ 8 ರಂದು ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ವಹಿಸಲಿದ್ಧಾರೆ ಎಂದರು.
ಆಳ್ವಾಸ್ ಉದ್ಯೋಗ ಮೇಳದ ಆರಂಭಿಕ ಹಂತದಲ್ಲಿ ಯೋಜನೆ, ಸಂಘಟನೆ ಹಾಗೂ ಯಶಸ್ವಿ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ನೀಡಿ ಮಹತ್ವದ ಕೊಡುಗೆ ನೀಡಿದ್ದ, ಇತ್ತೀಚೆಗೆ ಸ್ವರ್ಗಸ್ಥರಾದ ಎ.ಕೆ. ಮಹೇಶ್ ಶೇಖ ಅವರ ಸ್ಮರಣಾರ್ಥ, ಈ ವರ್ಷದ ಆಳ್ವಾಸ್ ಪ್ರಗತಿಯ ಉದ್ಘಾಟನಾ ವೇದಿಕೆಯನ್ನು ಅವರಿಗೆ ಗೌರವಪೂರ್ವಕವಾಗಿ ಸಮರ್ಪಿಸಲಾಗುತ್ತಿದೆ. ಜೊತೆಗೆ ಉದ್ಯಮಶೀಲತೆ, ಉದ್ಯೋಗ ಸೃಷ್ಟಿ ಮತ್ತು ಸಮಾಜಮುಖಿ ಸೇವೆಯಲ್ಲಿ ಸಾಧನೆಗೈದ 5 ಕರಾವಳಿಯ ಸಾಧಕರಿಗೆ ಆಳ್ವಾಸ್ ಪ್ರಗತಿಯಲ್ಲಿ ಗೌರವ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಈ ಬಾರಿಯ ಉದ್ಯೋಗಮೇಳದಲ್ಲಿ ದೇಶ ವಿದೇಶಗಳ 350 ಕ್ಕೂ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಔಷಧ, ಮಾಧ್ಯಮ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 26,300 ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಾವಣೆ ಮಾಡಿಕೊಳ್ಳಬೇಕು ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…